LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜನತಾ ನ್ಯಾಯಾಲಯದ ಸದುಪಯೋಗಕ್ಕೆ ನ್ಯಾಯಾಧೀಶ ರಾಮಾ ನಾಯಕ ಕರೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅನಾವಶ್ಯಕವಾಗಿ ವ್ಯರ್ಥವಾಗುವ  ಹಣ ಹಾಗೂ ಸಮಯದ ಉಳಿತಾಯವಾಗುತ್ತದೆ. ಹೀಗಾಗಿ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಮಾ ನಾಯಕ ಕರೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಕಕ್ಷಿದಾರರಿಗೆ ತಿಳುವಳಿಕೆ ನೀಡಿದ ಅವರು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗಿದ್ದ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಅಮಲ್ಜಾರಿ ಪ್ರಕರಣಗಳು ಸೇರಿದಂತೆ ಒಟ್ಟು 14592 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡು ಪರಸ್ಪರ ಸೌರ್ಹಾದತೆಯಿಂದ ಸಮಾಜದಲ್ಲಿ ಜೀವನ ಸಾಗಿಸುವಂತೆ ಅವರು ಸಲಹೆ ನೀಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್.ಹಾಗರಗಿ ಅವರು, ಜಿಲ್ಲೆಯಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 8 ಜೋಡಿಗಳನ್ನು ರಾಜಿ ಸಂಧಾನದ ಮೂಲಕ ವೈವಾಹಿಕ ಜೀವನ ನಡೆಸಲು ಒಪ್ಪಿಸಲಾಯಿತು. ಜನತಾ ನ್ಯಾಯಾಲಯದ ಯಶಸ್ವಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ಪೊಲೀಸ್ ಅಧಿಕಾರಿ, ಸಿಬ್ಬಂದಿ ಸೇರಿದಂತೆ ಸಾರ್ವಜನಿಕರ ಕಾರ್ಯಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ರಾಮಾ ನಾಯಕ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST