ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಿಸಿಆರ್ ವಿಭಾಗದ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜ ಹೇರೂರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಗಾ ನಗರದ ಮನೆಯಲ್ಲಿ ಫ್ಯಾನ್ ಗೆ ಸೀರೆಯಿಂದ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ತಂದೆ, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿನ್ನ ತಡರಾತ್ರಿ ಸ್ನೇಹಿತರಿಗೆ ಫೋನ್ ಮಾಡಿ ಆತ್ಮಹತ್ಯೆಯ ವಿಚಾರ ಹೇಳಿದ್ದಾರೆ. ಇವರ ತಂದೆಗೆ ಸ್ನೇಹಿತರು ಹೇಳಿದ್ದಾರೆ. ಅವರು ತಕ್ಷಣ ಮನೆಯ ಬಾಗಿಲು ಒಡೆದು ನೋಡಿದಾಗ ನೇಣು ಹಾಕಿಕೊಂಡಿರುವುದು ತಿಳಿದಿದೆ. ಪತ್ನಿ ಹಿರಿಯ ಪ್ರಾಥಮಿಕ ಶಾಲೆಯ ಶಕ್ಷಕಿಯಾಗಿದ್ದಾರೆ. ತಂದೆ ನಿವೃತ್ತ ನೌಕರ ಎಂದು ತಿಳಿದು ಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಅನ್ನೋದು ತಿಳಿದು ಬರಬೇಕಿದೆ.



