LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಲಬುರಗಿ: ನೀಟ್ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಜಾಸ್ತ್ರ ಸುದ್ದಿ

ಕಲಬುರಗಿ(Kalaburagi): ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ. ಈ ಬಗ್ಗೆ ಮೃತ ವಿದ್ಯಾರ್ಥಿನಿ ಭಾಗ್ಯಶ್ರೀ(18) ತಂದೆ ರಾಜಶೇಖರ್ ಭಾನುವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಮಗಳು ದ್ವಿತೀಯ ಪಿಯುಸಿಯಲ್ಲಿ ಶೇಕಡ 92ರಷ್ಟು ಫಲಿತಾಂಶ ಮಾಡಿದ್ದಾಳೆ. ಮನೆಯಲ್ಲಿ ಯಾವುದೇ ಸಮಸ್ಯೆಯಿಲ್ಲ. ನೀಟ್ ಪರೀಕ್ಷೆಯಲ್ಲಿಯೂ ಉತ್ತಮ ಸಾಧನೆ ಮಾಡಿದ್ದಳು ಎಂದಿದ್ದಾರೆ.

ಅವಳ ಮನಸ್ಸಿನಲ್ಲಿ ನೀಟ್ ಪರೀಕ್ಷೆ ಮತ್ತೆ ಬರೆಯಬೇಕು ಅನ್ನೋ ಭಾವನೆ ಇದ್ದಿರಬಹುದು. ಅವಳ ನೋವು ನಮಗೆ ತಿಳಿದಿಲ್ಲ. ಯಾರನ್ನೂ ದೂಷಿಸುವುದಿಲ್ಲ ಎಂದಿದ್ದಾರೆ. ಮೃತ ವಿದ್ಯಾರ್ಥಿನಿ ಯಾವುದೇ ಡೆತ್ ನೋಟ್ ಬರೆದಿಲ್ಲ. ಸಾವಿಗೆ ಯಾವುದೇ ಕಾರಣ ಸಹ ನೀಡಿಲ್ಲ ಅಂತಾ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಹಾಗಾದರೆ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಅನ್ನೋ ಪ್ರಶ್ನೆ ಮೂಡಿದೆ. ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ಬಳಿಕ ಪರೀಕ್ಷೆ ರದ್ದುಗೊಳಿಸಲಾಗಿದೆ. ಹಲವರು ಬಂಧನವಾಗಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST