LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಿರ್ದೇಶಕನ ಮೇಲೆ ಗುಂಡಿನ ದಾಳಿ?: ಕನ್ನಡದ ನಟನ ಬಂಧನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನಿರ್ದೇಶಕ ಭರತ್ ಮೇಲೆ ಕನ್ನಡ ಕಿರುತರೆ ನಟ ತಾಂಡವ್ ರಾಮ್ ಗುಂಡಿನ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರಂತೆ. ಸಿನಿಮಾ ಹಾಗೂ ಹಣಕಾಸಿನ ವಿಚಾರವಾಗಿ ಸೋಮವಾರ ಸಂಜೆ ಸುಮಾರು 6.30ರ ಸುಮಾರಿಗೆ ಗಲಾಟೆ ನಡೆದಿದ್ದು, ಈ ವೇಳೆ ಗುಂಡಿನ ದಾಳಿ ನಡೆದಿದೆಯಂತೆ.

ನಟ ತಾಂಡವ್ ರಾಮ್, ಜೋಡಿ ಹಕ್ಕಿ, ಭೂಮಿಗೆ ಬಂದ ಭಗವಂತ ಧಾರವಾಹಿಗಳಲ್ಲಿ ಲೀಡ್ ರೋಲ್ ಮಾಡಿದ್ದಾರೆ. ಜೊತೆಗೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಭರತ್ ಮುಗಿಲ್ ಪೇಟೆ ಎನ್ನುವ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಅದು ಅಷ್ಟೊಂದು ಸಕ್ಸಸ್ ಕಾಣಲಿಲ್ಲ. ನಿರ್ದೇಶಕ ಭರತ್, ನಟ ತಾಂಡವ್ ರಾಮ್ ಜೊತೆಗೆ ದೇವನಾಂಪ್ರಿಯ ಎನ್ನುವ ಸಿನಿಮಾ ಶುರು ಮಾಡಿದ್ದಾರೆ. ಆದರೆ, ನಿರ್ಮಾಪಕರ ಸಮಸ್ಯೆಯಿಂದ ಕಳೆದ ಎರಡು ವರ್ಷಗಳಿಂದ ಸರಿಯಾಗಿ ಶೂಟಿಂಗ್ ಮಾಡಲು ಆಗಿಲ್ಲ. ಹೀಗಾಗಿ ನಟ ತಾಂಡವ್ ರಾಮ್ ಹಂತ ಹಂತವಾಗಿ 6 ಲಕ್ಷ ರೂಪಾಯಿಯನ್ನು ನಿರ್ದೇಶಕರಿಗೆ ನೀಡಿದ್ದಾರಂತೆ.

ಮುಂದೆ ಹಾಸನದವರೊಬ್ಬರು ಹಣ ಹೂಡಿಕೆ ಮಾಡಲು ಬಂದಿದ್ದಾರೆ. ಆದರೂ ಸಿನಿಮಾ ಶೂಟಿಂಗ್ ಶುರು ಮಾಡಿಲ್ಲವಂತೆ. ಇದೇ ವಿಚಾರವಾಗಿ ಗಲಾಟೆಯಾಗಿದೆಯಂತೆ. ಆಗ ನಟ ತಾಂಡವ್ ರಾಮ್ ಸಿಟ್ಟಿನಲ್ಲಿ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿದ್ದು ಅವರು ತಪ್ಪಿಸಿಕೊಂಡ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಅವರೆ ಪೊಲೀಸರಿಗೆ ದೂರು ಸಲ್ಲಿಸಿದ್ದು, ನಟನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST