ಪ್ರಜಾಸ್ತ್ರ ಸುದ್ದಿ
ತ್ರಿಶೂರ್(Thrissur): ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 8 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೇರಳಂನ ತ್ರಿಶೂರ್ ಜಿಲ್ಲೆಯ ಕೈಪಮಂಗಲಂ ಹತ್ತಿರದ ಪನಂಬಿಕ್ಕು ಪ್ರದೇಶದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಸುಮಾರು 11.40ರ ಸಂದರ್ಭದಲ್ಲಿ ಇಂತಹದೊಂದು ದಾರುಣ ಘಟನೆ ನಡೆದಿದೆ.
ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಎಂಟೂ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದು ತ್ರಿಶೂರ್ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಗುರುವಾಯೂರು ಕಡೆಯಿಂದ ಕೊಡುಂಗಲ್ಲೂರಿನತ್ತ ಕಾರು ಹೊರಟಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ಹೇಳಲಾಗುತ್ತಿದೆ. ತಮಿಳುನಾಡಿನ ನೋಂದಣಿ ಹೊಂದಿದ್ದು, ಪೊಲೀಸರ ತನಿಖೆ ನಡೆದಿದೆ. ಮೃತ ವಿದ್ಯಾರ್ಥಿಗಳ ಗುರುತು ಪತ್ತೆಯಾಗಬೇಕಿದೆ.



