LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ತುಳಿತ ಪ್ರಕರಣ: ಕೆಎಸ್ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಆರ್ ಸಿಬಿ ವಿಜಯೋತ್ಸವದ ವೇಳೆ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಹತ್ತಿರ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಹಾಗೂ ಖಜಾಂಚಿ ರಾಜೀನಾಮೆ ನೀಡಿದ್ದಾರೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾರ್ಯದರ್ಶಿ ಎ.ಶಂಕರ್ ಹಾಗೂ ಖಜಾಂಚಿ ಇ.ಎಸ್ ಜೈರಾಮ್ ಗುರುವಾರವೇ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿಸಿದೆ.

ಈ ದುರಂತದಲ್ಲಿ ನಮ್ಮ ಪಾತ್ರ ತುಂಬಾ ಸೀಮಿತವಾಗಿದ್ದರೂ ನಾವು ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರಂತೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ಅಮಾನತು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯನ್ನು ವಜಾ ಮಾಡಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಇದು ದೊಡ್ಡ ಸುದ್ದಿ ಮಾಡಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST