LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲಿಕಾರ್ಜುನ ಖರ್ಗೆ ಆರೋಗ್ಯವಾಗಿದ್ದಾರೆ: ಪ್ರಿಯಾಂಕ್ ಖರ್ಗೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge)ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ನಡೆದ ಚುನಾವಣೆ ಪ್ರಚಾರದ ವೇಳೆ ಮಾತನಾಡುತ್ತಿದ್ದಾಗಲೇ ಅಸ್ವಸ್ಥಗೊಂಡಿದ್ದಾರೆ. ಇದರಿಂದಾಗಿ ಸಾಕಷ್ಟು ಜನರಲ್ಲಿ ಆತಂಕ ಮನೆ ಮಾಡಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಖರ್ಗೆ ಪುತ್ರ ಹಾಗೂ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ, ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ವೈದ್ಯಕೀಯ ತಂಡ ಖರ್ಗೆಯವರ ಆರೋಗ್ಯವನ್ನು ಪರೀಕ್ಷಿಸಿದೆ. ರಕ್ತದೊತ್ತಡ ಸ್ವಲ್ಪ ಕಡಿಮೆಯಾಗಿದ್ದರಿಂದ ಅಸ್ವಸ್ಥಗೊಂಡಿದ್ದರು. ಅವರು ಆರೋಗ್ಯವಾಗಿದ್ದಾರೆ. ನಿಮ್ಮ ಕಾಳಜಿಗೆ ಕೃತಜ್ಞನಾಗಿದ್ದೇನೆ ಅಂತಾ ಹೇಳಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತಿದ್ದ ಸಂದರ್ಭದಲ್ಲಿಯೇ ಮಾತು ತಡವರಿಸಿತು. ಏಕಾಏಕಿ ಬೀಳುವಂತೆ ಕಂಡು ಬಂದರು. ಕೂಡಲೇ ವೇದಿಕೆ ಮೇಲಿದ್ದವರು ಅವರನ್ನು ಹಿಡಿದುಕೊಂಡು ನಿಂತರು. ಇದನ್ನು ನೋಡಿದ ಪ್ರತಿಯೊಬ್ಬರು ಆತಂಕ ಮೂಡಿತ್ತು. ಆರೋಗ್ಯವಾಗಿದ್ದಾರೆ ಎಂದು ಪುತ್ರ ದೃಢಪಡಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST