LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ ಹೈಕೋರ್ಟ್ ಪೀಠ ಸೇರಿ ಹಲವು ಕೋರ್ಟ್ ಗಳಿಗೆ ಬಾಂಬ್ ಬೆದರಿಕೆ

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ರಾಜ್ಯದಲ್ಲಿ ಹಲವು ಕೋರ್ಟ್ ಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಧಾರವಾಡ ಹೈಕೋರ್ಟ್ ಪೀಠ ಸೇರಿದಂತೆ ವಿವಿಧ ನ್ಯಾಯಾಲಯಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಹೀಗಾಗಿ ಎಲ್ಲೆಡೆ ತಪಾಸಣೆ ಕಾರ್ಯ ನಡೆಸಲಾಗುತ್ತಿದೆ. ಈ ಘಟನೆಯಿಂದ ಜನರಲ್ಲಿ ಆತಂಕ ಮೂಡಿದೆ.

ಧಾರವಾಡ, ದಾವಣಗೆರೆ, ಕೊಡಗು, ಕಾರವಾರ, ಉತ್ತರ ಕನ್ನಡ, ರಾಮನಗರ, ಹಾವೇರಿ ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಬೆದರಿಕೆ ಮೇಲ್ ಬಂದಿದೆ. ದಾವಣಗೆರೆಯ ಜಿಲ್ಲಾ ನ್ಯಾಯಾಧೀಶರ ಮೇಲ್ ಗೆ, ಕಾರವಾರದ ಜಿಲ್ಲಾ ಸೆಷನ್ಸ್ ಕೋರ್ಟ್ ಕಚೇರಿ ಮೇಲ್ ಗೆ, ಬೆಂಗಳೂರು ದಕ್ಷಿಣ ಜಿಲ್ಲಾ ನ್ಯಾಯಾಧೀಶರ ಕೊಠಡಿಯಲ್ಲಿ ಬಾಂಬ್ ಇಡಲಾಗಿದೆ. ಹೀಗೆ ಹಲವು ನ್ಯಾಯಾಲಯಗಳ ಕಟ್ಟಡಗಳಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಬೆದರಿಕೆಯ ಮೇಲ್ ಬಂದಿದೆ.

ರಾಜ್ಯದಲ್ಲಿ ಇದು ನಿಜಕ್ಕೂ ಆತಂಕ ಮೂಡಿಸಿದೆ. ಪೊಲೀಸರು, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದವರು ಎಲ್ಲಡೆ ತಪಾಸಣೆ ನಡೆಸುತ್ತಿದ್ದಾರೆ. ನ್ಯಾಯಾಲಯದ ಕೊಠಡಿಗಳು, ಆವರಣ, ವಾಹನ ನಿಲುಗಡೆ ಸ್ಥಳಗಳು ಸೇರಿದಂತೆ ಸುತ್ತಮುತ್ತ ತಪಾಸಣೆ ನಡೆಸಲಾಗುತ್ತಿದೆ. ಯಾರು ಈ ರೀತಿ ಮಾಡಿದ್ದು, ಇದರ ಹಿಂದೆ ಇರೋದು ಯಾರು ಅನ್ನೋ ಕುತೂಹಲ ಮೂಡಿದೆ. ಇಷ್ಟೊಂದು ನ್ಯಾಯಾಲಯಗಳಿಗೆ ಬಾಂಬ್ ಇಡಲಾಗಿದೆ ಅನ್ನೋ ಮೇಲ್ ಮಾಡಿರುವುದು ನೋಡಿದರೆ ಏನಾದರೂ ಸಂಚು ಇರಬಹುದಾ ಅನ್ನೋ ಪ್ರಶ್ನೆ ಮೂಡಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST