LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟಿ-20 ವಿಶ್ವಕಪ್ ಗೆದ್ದ ಟೀಂ ಇಂಡಿಯಾದಿಂದ ಹಲವು ದಾಖಲೆಗಳು

ಪ್ರಜಾಸ್ತ್ರ ಸುದ್ದಿ

ಅಹಮದಾಬಾದ್(Ahmedabad): ಭಾನುವಾರ ಸಂಜೆ ನಡೆದ ಟಿ-20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಭರ್ಜರಿ 96 ರನ್ ಗಳ ಅಂತರದಿಂದ ಜಯ ಸಾಧಿಸಿದೆ. ಈ ಮೂಲಕ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಭಾರತ ತಂಡ ನೀಡಿದ್ದ 256 ರನ್ ಗಳ ದೊಡ್ಡ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ಪಡೆ 19 ಓವರ್ ಗಳಲ್ಲಿ 159 ರನ್ ಗಳಿಗೆ ಆಲೌಟ್ ಆಯಿತು.

ಸೂರ್ಯಕುಮಾರ್ ಯಾದವ್ ನಾಯಕತ್ವದ ಪಡೆ ಟಿ-20 ವಿಶ್ವ ಚಾಂಪಿಯನ್ಸ್ ಆಗುವುದರ ಜೊತೆಗೆ ಹಲವು ದಾಖಲೆಗಳನ್ನು ಬರೆದಿದೆ. ಸತತ ಎರಡು ಬಾರಿ ಟಿ-20 ವಿಶ್ವಕಪ್ ಗೆದ್ದಿದೆ. 2024ರಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಚಾಂಪಿಯನ್ಸ್ ಆಗಿತ್ತು. ಮೂರು ಬಾರಿ ವಿಶ್ವಕಪ್ ಗೆದ್ದ ಮೊದಲ ತಂಡ ಭಾರತ. 2007ರಲ್ಲಿ ಶುರುವಾದ ಚುಟುಕು ವಿಶ್ವಕಪ್ ಭಾರತದ ಪಾಲಾಯಿತು. ನಾಯಕ ಎ.ಎಸ್ ಧೋನಿ ಟೀಂ ಪಾಕಿಸ್ತಾನವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.

ತವರು ಅಂಗಳದಲ್ಲಿ ವಿಶ್ವಕಪ್ ಗೆದ್ದ ಮೊದಲ ತಂಡ ಭಾರತ ಆಗಿದೆ. ಪ್ಲೇಯರ್ ಆಪ್ ದಿ ಮ್ಯಾಚ್(ಜಸ್ಪ್ರೀತ್ ಬೂಮ್ರಾ) ಹಾಗೂ ಪ್ಲೇಯರ್ ಆಪ್ ದಿ ಸೀರಿಸ್(ಸಂಜು ಸ್ಯಾಮ್ಸನ್) ಎರಡೂ ಭಾರತದ ಪಾಲಾಗಿದ್ದು ಸಹ ವಿಶೇಷ. ಟೀಂ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ ಮುಖ್ಯ ಕೋಚ್ ಆದ ಬಳಿಕ ಗೆದ್ದ ಮೊದಲ ವಿಶ್ವಕಪ್ ಇದಾಗಿದೆ. ಇದಕ್ಕೂ ಮೊದಲು ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಸೋಲು ಕಂಡಿತ್ತು. ಈ ಗೆಲುವನ್ನು ಹಿಂದಿನ ಕೋಚ್ ಗಳಾದ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ ಅವರಿಗೆ ಅರ್ಪಿಸುತ್ತೇನೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST