ಪ್ರಜಾಸ್ತ್ರ ಸುದ್ದಿ
ಮುನಿರಾಬಾದ್(Munirabad): ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್ ಗಳ ಲೋಕಾರ್ಪಣೆ ಕಾರ್ಯಕ್ರಮ ಶುರುವಾಗಿದೆ. ಇದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುತ್ತಿದ್ದಾರೆ.
ಜಲಾಶಯದ 18ನೇ ಗೇಟ್ ಹತ್ತಿರ 33 ಹೊಸ ಕ್ರಸ್ಟ್ ಗೇಟ್ ಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ನಂತರ ಮುನಿರಾಬಾದ್ ನ ಪ್ರೌಢಶಾಲೆಯ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ. ಇದಾದ ಬಳಿಕ ಅಂತರರಾಜ್ಯ ನದಿಗಳ ಯೋಜನೆ ಕುರಿತು ಸಭೆ ನಡೆಯಲಿದೆ. ಕೊಪ್ಪಳ ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗಣ್ಯರನ್ನು ಗೌರವ ವಂದನೆ ಮೂಲಕ ಸ್ವಾಗತಿಸಲಾಗಿದೆ.



