LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಬಚಿ-ಬಬಲೇಶ್ವರ ಏತ ನೀರಾವರಿ: ಹಣ ಬಿಡುಗಡೆಗೆ ಸಚಿವರ ಸೂಚನೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು/ವಿಜಯಪುರ(Bengaloru/Vijayapura): ವಿಜಯಪುರ ಜಿಲ್ಲೆಯ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಭೂಸ್ವಾಧೀನ ಪ್ರಕ್ರಿಯೆ ನೆನಗುದಿಗೆ ಬಿದ್ದಿರುವ ಬಗ್ಗೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಂಬಂದಪಟ್ಟ ಎಲ್ಲ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಭೂಸ್ವಾಧೀನಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಯೋಜನೆಯಿಂದ 52,700 ಎಕರೆಗೆ ನೀರಾವರಿ ಸೌಲಭ್ಯ ಸಿಗಲಿದೆ. ಇದರಲ್ಲಿ 37,200 ಎಕರೆ ಜಮೀನು ನಾನು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲೇ ಇದೆ. ಈಗಾಗಲೇ ವಿತರಣಾ ಕಾಲುವೆ, ಉಪಕಾಲುವೆ, ಹೊಲಗಾಲುವೆ ಕಾಮಗಾರಿಗಳೆಲ್ಲ ಮುಗಿದು ನೀರು ಹರಿಯುತ್ತಿದೆ. ಇದರ ಪ್ರಯೋಜನ ರೈತರಿಗೂ ಆಗುತ್ತಿದೆ ಎಂದು ಹೇಳಿದರು.

ಈ ಯೋಜನೆಗೆ ಅಗತ್ಯ ಜಮೀನು ಬಿಟ್ಟುಕೊಡುವಂತೆ ರೈತರಿಗೆ ಮನವಿ ಮಾಡಿಕೊಂಡಿದ್ದೆ. ರೈತರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅಂಥವರಿಗೆ ಈಗ ಪರಿಹಾರ ಹಣ ನೀಡಲು ಸಬೂಬು ಹೇಳುತ್ತಿರುವುದು ಸರಿಯಲ್ಲ. ಆದಷ್ಟು ಬೇಗ ಪ್ರಕ್ರಿಯೆ ಮುಗಿಯಬೇಕು ಎಂದು ಅವರು ಸೂಚಿಸಿದ್ದಾರೆ. ಭೂಸ್ವಾಧೀನಾಧಿಕಾರಿ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆ ಇದೆ. ಇದನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಾಂತ್ರಿಕ ವಿಷಯಗಳ ನೆಪವೊಡ್ಡಿ ರೈತರಿಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ರೇಗಿದರು. ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್‌, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮೀನ್‌ಬಾವಿ, ನಿಗಮದ ಮುಖ್ಯ ಆಡಳಿತಾಧಿಕಾರಿ ಔದರಂ, ವಿಶೇಷ ಜಿಲ್ಲಾಧಿಕಾರಿ ಹರ್ಷ ಶೆಟ್ಟಿ, ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಬಿ.ಎ.ನಾಗರಾಜ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST