LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಮಿಯೊಂದಿಗೆ ಅಪ್ರಾಪ್ತೆ ಆತ್ಮಹತ್ಯೆ

ಪ್ರಜಾಸ್ತ್ರ ಸುದ್ದಿ

ಚಿಕ್ಕಬಳ್ಳಾಪುರ(Chikkaballapura): ತಮ್ಮ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದರು ಎಂದು ಪ್ರೇಮಿಯೊಂದಿಗೆ(Lovers) ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸೀತಾರಾಮಪುರ ಗ್ರಾಮದಲ್ಲಿ ನಡೆದಿದೆ. ನವೀನ್(22) ಹಾಗೂ ಅಪ್ರಾಪ್ತೆ ಶುಕ್ರವಾರ ಸಂಜೆ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನವೀನ್ ಹಾಗೂ 15 ವರ್ಷದ ಅಪ್ರಾಪ್ತೆ ಪ್ರೀತಿಸುತ್ತಿದ್ದರು. ಇಬ್ಬರು ಒಂದೇ ಸಮುದಾಯದವರಾಗಿದ್ದರು. ಆದರೆ, ಇವರ ಪ್ರೀತಿಗೆ ಬಾಲಕಿಯ ಕುಟುಂಬಸ್ಥರು ವಿರೋಧಿಸಿದ್ದರು. ನವೀನ್ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಮಾರ್ಚ್ 30ರಂದು ಬಟ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರಿಂದಾಗಿ ನವೀನ್ ತಲೆ ಮರೆಸಿಕೊಂಡಿದ್ದ. ಮುಂದೆ ಪೊಲೀಸರು ಗೌನಿಪಲ್ಲಿ ಗ್ರಾಮದಲ್ಲಿ ಬಂಧಿಸಿದ್ದರು. ಜೈಲಿನಿಂದ ಹೊರ ಬಂದ ಬಳಿಕ ಬಾಲಕಿಯನ್ನು ಭೇಟಿಯಾಗಿದ್ದ. ಈಗ ನೋಡಿದರೆ ಸೆಪ್ಟೆಂಬರ್ 13ರ ಸಂಜೆ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST