ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ ರಾಜೀನಾಮೆ ನೀಡಿದ್ದಾರೆ. ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದು ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದಿಂದ 2021ರಲ್ಲಿ ನಡೆದ ಪರಿಷತ್ ಚುನಾವಣೆಯಲ್ಲಿನ ಬಿಜೆಪಿಯ ಎಂ.ಕೆ.ಪ್ರಾಣೇಶ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಹೀಗಾಗಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಗಾಯತ್ರಿ ಶಾಂತೇಗೌಡ ಗೆಲುವಿನ ಅಭ್ಯರ್ಥಿ ಎಂದು ಘೋಷಿಸಲಾಗಿದೆ.



