LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇಶದ ಅಭಿವೃದ್ಧಿಗಾಗಿ ಶ್ರಮಿಸುವ ಮೋದಿ: ರಮೇಶ ಜಿಗಜಿಣಗಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸುವವರು. ದೇಶದ ಅಭಿವೃದ್ಧಿಗಾಗಿ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಸಂಸದ ರಮೇಶ ಜಿಗಜಣಗಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ವಾರ್ಡ್ ನಂಬರ್ 6ರಲ್ಲಿನ ರಾಜೇಂದ್ರ ನಗರದಲ್ಲಿ ಏರ್ಪಡಿಸಿದ ಸಸಿ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ವಿವಿಧ ಸೇವಾ ಚಟುವಟಿಕೆಯಲ್ಲಿ ನಮ್ಮ ಕಾರ್ಯಕರ್ತರು ತೊಡಗಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸ್ವಚ್ಛತಾ ಅಭಿಯಾನ ಮುಂತಾದ ಕಾರ್ಯಕ್ರಮಗಳು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ಜಿಲ್ಲಾಧ್ಯಕ್ಷ ಆರ್.ಎಸ್.ಪಾಟಿಲ ಕುಚಬಾಳ ಮಾತನಾಡಿ, ವಿಶ್ವಕರ್ಮ ಯೋಜನೆಯಡಿ ಇದೇ 20ರಂದು ದೇಶದ 20 ಲಕ್ಷ ವಿಶ್ವಕರ್ಮರಿಗೆ ಹಣಕಾಸಿನ ಸೌಲಭ್ಯ ಒದಗಿಸಲಾಗುತ್ತದೆ. ಮಹಿಳೆಯರ ಘನತೆ ಹೆಚ್ಚಿಸಲು ಶೌಚಾಲಯ ನಿರ್ಮಾಣ, ಗ್ಯಾಸ್ ಸಿಲಿಂಡರ್‌ಗಳನ್ನು ನೀಡಲಾಗಿದೆ. ಪರಿಶಿಷ್ಟ ಸಮುದಾಯ, ಹಿಂದುಳಿದ ವರ್ಗ, ಮಹಿಳೆಯರು, ಯುವಕರಿಗಾಗಿ ಅನೇಕ ಯೋಜನೆಗಳನ್ನು ಮೋದಿ ಅವರು ಜಾರಿಗೊಳಿಸಿದ್ದಾರೆ ಎಂದರು. ಮಹಾನಗರ ಪಾಲಿಕೆ ಸದಸ್ಯ ಮಳುಗೌಡ ಪಾಟಿಲ ಮಾತನಾಡಿದರು. ಈ ವೇಳೆ ಬಿಜೆಪಿ ಮುಖಂಡರಾದ ಚಂದ್ರಶೇಖರ ಕವಟಗಿ, ಸುರೇಶ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವುರ, ನಗರ ಘಟಕದ ಅಧ್ಯಕ್ಷ ಶಂಕರ ಹೂಗಾರ, ಎಸ್.ಎ.ಪಾಟೀಲ, ಕೃಷ್ಣಾ ಗುನಾಳಕರ, ವಿಜಯ ಜೋಶಿ, ಕಾಂತು ಸಿಂಧೆ, ಮಹಾನಗರ ಪಾಲಿಕೆ ಸದಸ್ಯರಾದ ಎಮ್.ಎಸ್. ಕರಡಿ, ಪ್ರೇಮಾನಂದ ಬಿರಾದಾರ, ಸಚೀನ ಕುಮಶಿ, ನಂದು ಬಡಗಿ, ಪಾಪುಸಿಂಗ್ ರಜಪೂತ, ವಾರೀಶ ಕುಲಕರ್ಣಿ, ಪ್ರಕಾಶ ಬಾಗೇವಾಡಿ, ಉದಯ ಕನ್ನೋಳಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST