LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕಿ ಮೇಲಿನ ಅತ್ಯಾಚಾರ ತಪ್ಪಿಸಿದ ಕೋತಿಗಳು

ಪ್ರಜಾಸ್ತ್ರ ಸುದ್ದಿ

ಬಾಗ್ ಪತ್(Bagpat): ವಿಕೃತ ಕಾಮಿಯೊಬ್ಬ ಕೇವಲ 6 ವರ್ಷದ ಕೂಸಿನ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ಬಾಗ್ ಪತ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಕೋತಿಗಳು ಈ ವೇಳೆ ಆ ನೀಚನ ಮೇಲೆ ದಾಳಿ ನಡೆಸಿವೆ. ಇದರಿಂದಾಗಿ ಮಗು ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿದೆ. ಮನೆಯಲ್ಲಿ ಪೋಷಕರು ಈ ಬಗ್ಗೆ ಹೇಳಿದೆ. ಪೋಕ್ಸೊ ಕಾಯ್ದೆ(Pocso Act) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಬಾಗ್ ಪತ್ ನ ದೌಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಮಾಹಿತಿ ಪ್ರಕಾರ ಆರೋಪಿ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಹರಿಸಿ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿದ್ದಾನೆ. ಆಗ ಕೋತಿಗಳು(Monkey) ದಾಳಿ ನಡೆಸಿವೆ. ಇದರಿಂದಾಗಿ ಆತ ಪರಾರಿಯಾಗಿದ್ದಾನೆ. ಆರೋಪಿಯ ಬಂಧನಕ್ಕೆ ಎಲ್ಲ ರೀತಿ ಕಾರ್ಯಾಚರಣೆ ನಡೆದಿದೆ ಎಂದು ತಿಳಿಸಿದ್ದಾರೆ. ಮಗುವಿನ ಮೇಲೆ ಆಗುತ್ತಿದ್ದಂತೆ ಅನಾಹುತ ತಪ್ಪಿಸಿದ ಕೋತಿಗಳಿಗೆ ಎಲ್ಲರೂ ಸ್ಮರಿಸಿಕೊಳ್ಳುತ್ತಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST