LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಸ್ಥಾನಕ್ಕೆ 40ಕ್ಕೂ ಹೆಚ್ಚು ಶಾಸಕರ ಲಾಬಿ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ಎಷ್ಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಅನ್ನೋ ಕುತೂಹಲವಿದೆ. ಯಾಕಂದರೆ, ಬರೋಬ್ಬರಿ 40ಕ್ಕೂ ಹೆಚ್ಚು ಶಾಸಕರು ದೆಹಲಿಯಲ್ಲಿ ಲಾಬಿ ನಡೆಸಿದ್ದಾರಂತೆ. ಹೈಕಮಾಂಡ್ ನಾಯಕರೊಂದಿಗೆ ನಿರಂತರವಾಗಿ ಚರ್ಚೆ ನಡೆಸಿ ಮಂತ್ರಿಗಿರಿ ಪಡೆಯಲು ಕಸರತ್ತು ನಡೆಸಿದ್ದಾರೆ.

ಇಂದು(ಮಂಗಳವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸಭೆಯಲ್ಲಿ ಚರ್ಚೆ ನಡೆಸಲಿದ್ದು, ಸಚಿವರ ಪಟ್ಟಿ, ರಾಜ್ಯಸಭಾ ಹಾಗೂ ಪರಿಷತ್ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST