ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಇಲ್ಲಿನ ಜಿಲ್ಲಾ ನ್ಯಾಯಾಲಯ ಹಾಗೂ ಜಯನಗರದಲ್ಲಿರುವ ಕೌಟುಂಬಿಕ ನ್ಯಾಯಾಲಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹೀಗಾಗಿ ಪೊಲೀಸರು ಸ್ಥಳಕ್ಕೆ ಬಂದು ತೀವ್ರ ತಪಾಸಣೆ ನಡೆಸಿದರು. ಕೆಲ ತಿಂಗಳ ಹಿಂದೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು.
ಬುಧವಾರ ತಡರಾತ್ರಿ 1.50ರ ಸುಮಾರಿಗೆ ಕೋರ್ಟಿನ ಅಧಿಕೃತ ಮೇಲ್ ಗೆ ಬಾಂಬ್ ಬೆದರಿಕೆ ಮೆಸೇಜ್ ಬಂದಿದೆ. ಮುಂಜಾನೆ 6 ಗಂಟೆಯಿಂದಲೇ ಪೊಲೀಸರು ತಪಾಸಣೆ ನಡೆಸಿದ್ದಾರೆ. ಕೆಲ ವರ್ಷಗಳ ಹಿಂದೆ ನ್ಯಾಯಾಲಯದ ಶೌಚಾಲಯದಲ್ಲಿ ಬಾಂಬ್ ಸ್ಫೋಟವಾಗಿತ್ತು.



