ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿರಿಗನ್ನಡ ಫೌಂಡೇಶನ್ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಕ್ಷೇಮಾಭಿವೃದ್ಧಿ ಸಂಘ ಯಲಹಂಕ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕೊಡಮಾಡುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಸಿ.ಬಿ.ಇಂಡಿ ಇವರಿಗೆ ಲಭಿಸಿದೆ. ಬೆಂಗಳೂರಿನಲ್ಲಿರುವ ಕುವೆಂಪು ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗೌರವಿಸಲಾಯಿತು.
ಧಾರವಾಡ ಜಿಲ್ಲೆಯ ಗೋವನಕೊಪ್ಪದ ಎಂ.ವಾ ನಲವಡಿ ಪ್ರೌಢಶಾಲೆಯಲ್ಲಿ ಸಿ.ಬಿ.ಇಂಡಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ವೃತ್ತಿ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ವೇಳೆ ಊರಿನ ಹಿರಿಯರು ಮತ್ತು ಸಿಬ್ಬಂದಿ ವರ್ಗದವರು ಸನ್ಮಾನಿಸಿದರು. ಶಾಲೆಯ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ ಬಳಗ, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.



