LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಾರ ಜಮೀನನ್ನೂ ಬಲವಂತವಾಗಿ ಪಡೆಯುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸರ್ಕಾರವು ಯಾವುದೇ ರೈತರಿಂದ ಬಲವಂತವಾಗಿ ಜಮೀನು ಪಡೆಯುವುದಿಲ್ಲ. ಸ್ವಇಚ್ಛೆಯಿಂದ ಮುಂದೆ ಬಂದು ಭೂಮಿ ಕೊಟ್ಟವರಿಗೆ ಪರಿಹಾರ ನೀಡುತ್ತೇವೆ. ಈ ವಿಚಾರದಲ್ಲಿ ರೈತರ ಅಹವಾಲು, ಅಭಿಪ್ರಾಯ ಪಡೆಯಲು ಸಮಿತಿ ರಚಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು.

ಯಾವ ಪ್ರತಿಭಟನೆ ಅಗತ್ಯವಿಲ್ಲ, ನಿಮ್ಮ ಜಮೀನಿನಲ್ಲಿ ನೆಮ್ಮದಿಯಾಗಿರಿ: ಯಾರ ಆಸ್ತಿಯನ್ನು ನಾವು ಬಲವಂತವಾಗಿ ಪಡೆಯುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದವರು ನೆಮ್ಮದಿಯಾಗಿ ತಮ್ಮ ಜಮೀನಿನಲ್ಲಿ ಇರಬಹುದು. ಯಾವ ಧರಣಿ, ಪ್ರತಿಭಟನೆ ಅವಶ್ಯಕತೆ ಇಲ್ಲ. ಮುಖ್ಯಮಂತ್ರಿಗಳಾಗಿದ್ದಾಗ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪನವರು ಮಾರ್ಗದರ್ಶನದಂತೆ ಯೋಜನೆ ಪ್ರಕ್ರಿಯೆ ಮುಂದುವರಿದಿದೆ. ನಾನು ಯಾರಿಗೂ ಬಲವಂತ ಮಾಡುವುದಿಲ್ಲ. ಅವರು ಹೊರಡಿಸಿರುವ ರೆಡ್ ಜೋನ್ ಆದೇಶ ಮುಂದುವರಿಯುತ್ತದೆ. ಭೂಮಿ ನೀಡಲು ಇಷ್ಟವಿಲ್ಲದವರಿಗೆ ನಾನು ಬಲವಂತ ಮಾಡುವುದಿಲ್ಲ. ನಾನು ರೈತರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ಇಷ್ಟವಿಲ್ಲದವರು ಅವರ ಭೂಮಿ ಅವರೇ ಇಟ್ಟುಕೊಳ್ಳಲಿ. ಕುಮಾರಸ್ವಾಮಿ ಅವರು ಪ್ರತಿ ಎಕರೆಗೆ 8 ಸಾವಿರ ಅಡಿ ಅಭಿವೃದ್ಧಿಪಡಿಸಿದ ಭೂಮಿ ನೀಡಲು ಮುಂದಾಗಿದ್ದರು. ನಾವು ಶೇಕಡ 50 ಅಂದರೆ 9500 ಅಡಿ ಭೂಮಿ ನೀಡಲು ತೀರ್ಮಾನಿಸಿದೆವು. ಸ್ವಯಂ ಇಚ್ಛೆಯಿಂದ ಬರುವವರಿಗೆ ಪರಿಹಾರ ನೀಡಿ ಭೂಮಿ ಪಡೆಯುತ್ತೇವೆ” ಎಂದು ಸ್ಪಷ್ಟಪಡಿಸಿದರು.

ರಾಜಕೀಯಕ್ಕೆ ಬಲಿಯಾಗಬೇಡಿ, ನಿಮ್ಮ ಬದುಕು ನೀವು ಕಟ್ಟಿಕೊಳ್ಳಿ; ರೈತರಿಗೆ ಮನವಿ: ರೈತರು ಹೋರಾಟ ಧರಣಿ ಬಿಟ್ಟು ನಿಮ್ಮ ಬದುಕು ಕಟ್ಟಿಕೊಳ್ಳಿ. ರಾಜಕೀಯಕ್ಕಾಗಿ ಇವರು ನಿಮ್ಮನ್ನು ಬಲಿ ಕೊಡುತ್ತಿದ್ದಾರೆ. ನೀವು ಬಲಿಯಾಗಬೇಡಿ. ಸಮಿತಿಯವರು ನಿಮ್ಮ ಬಳಿಗೆ ಬಂದಾಗ, ಸಮಿತಿ ಮುಂದೆ ನಿಮ್ಮ ಅಭಿಪ್ರಾಯ ಹೇಳಿಕೊಳ್ಳಿ. ಹೊಡೆಯುವುದಾದರೆ ಬಂದು ನನಗೆ ಹೊಡೆಯಿರಿ” ಎಂದು ಮನವಿ ಮಾಡಿದರು.

ಡಿಎಲ್‌ಎಫ್‌ಗೆ ಟೆಂಡರ್ ನೀಡಿ ರಿಯಲ್ ಎಸ್ಟೇಟ್ ದಂಧೆ ಮಾಡಿದ್ದು ಯಾರು?: ಕುಮಾರಸ್ವಾಮಿ ಅವರು ಮಾಡಲು ಮುಂದಾಗಿದ್ದ ಟೌನ್ ಶಿಪ್ ನಲ್ಲಿ ಇಡಿ ಹಳ್ಳಿಗಳು, ಅಲ್ಲಿ ಬದುಕು ಕಟ್ಟಿಕೊಂಡಿದ್ದವರ ಮನೆಗಳನ್ನು ಸೇರಿ ಎಲ್ಲರನ್ನು ಒಕ್ಕಲೆಬ್ಬಿಸಲು ಆದೇಶ ಹೊರಡಿಸಿದ್ದರು. ಅವರದೇ ಆದ ಪರಿಹಾರ ಮಾರ್ಗಸೂಚಿ ಹೊರಡಿಸಿದ್ದರು. ನಮ್ಮಣ್ಣ ಮಾತೆತ್ತಿದರೆ ಬಿಡದಿ ಟೌನ್ ಶಿಪ್ ಅನ್ನು ರಿಯಲ್ ಎಸ್ಟೇಟ್ ಎಂದು ಹೇಳುತ್ತಾರೆ. ಅವರು ಈ ಟೌನ್ ಶಿಪ್ ನಿರ್ಮಾಣವನ್ನು ರಿಯಲ್ ಎಸ್ಟೇಟ್ ಕಂಪನಿ ಡಿಎಲ್ಎಫ್ ಗೆ ಜವಾಬ್ದಾರಿ ನೀಡಿ ಅವರಿಂದ 400 ಕೋಟಿ ರೂ. ಹಣ ಕೂಡ ಕಟ್ಟಿಸಿಕೊಂಡಿದ್ದರು. ಕುಮಾರಸ್ವಾಮಿ ಅವರು ಅನಾರೋಗ್ಯದದಲ್ಲಿದ್ದರೂ ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ರೈತರಿಗೆ ಅಭಿವೃದ್ಧಿಪಡಿಸಿದ ಪ್ರದೇಶದಲ್ಲಿ ಶೇಕಡ 40 ಜಮೀನನ್ನು (ಪ್ರತಿ ಎಕರೆಗೆ ಸುಮಾರು 8 ಸಾವಿರ ಅಡಿ) ಪರಿಹಾರವಾಗಿ ನೀಡುವುದಾಗಿ ಹೇಳಿದ್ದಾರೆ. ಆಗ ಪ್ರತಿ ಎಕರೆಗೆ 22-25 ಲಕ್ಷ ಪರಿಹಾರ ನಿಗದಿ ಪಡಿಸಿದರು. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಿದ್ದರು” ಎಂದು ದಾಖಲೆ ಸಮೇತ ವಿವರಿಸಿದರು.

ನಾನು ಸಿಎಂ ಆದ ಮೇಲೆ ಬಂದ ಛಲ, ಯಡಿಯೂರಪ್ಪ ಸರ್ಕಾರದ ತೀರ್ಮಾನದ ವಿರುದ್ಧ ಇರಲಿಲ್ಲ ಯಾಕೆ?: ಈ ವಿಚಾರದಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರು ತೆಗೆದುಕೊಳ್ಳಲು ನನಗೆ ಇಷ್ಟವಿಲ್ಲ. ಆದರೆ ಅವರು ಆ ಸ್ಥಾನದಲ್ಲಿ ಕೂತಿದ್ದಾರೆ. ಈ ಯೋಜನೆ ಆರಂಭವಾಗಿ 15 ವರ್ಷಗಳ ಬಳಿಕ 2019ರಲ್ಲಿ ಅವರ ಮೈತ್ರಿ ಪಕ್ಷ ಬಿಜೆಪಿ ಸರ್ಕಾರದ ಅವಧಿಯಲ್ಲಿ 80 ಲಕ್ಷದಿಂದ 1 ಕೋಟಿ ಪರಿಹಾರ ನೀಡಿ 900 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡರಲ್ಲ. ಆಗ ನಿಮ್ಮ ಹೋರಾಟ, ಧ್ವನಿ ಏನಾಗಿತ್ತು? ನಿಮ್ಮ ಕಿಚ್ಚು ಏನಾಗಿತ್ತು? ಆಗ ನಿಮ್ಮ ಧರಣಿ ಯಾಕೆ ನಡೆಯಲಿಲ್ಲ? ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಬಳಿಕ ನಿಮಗೆ ಈ ಛಲ ಬಂದಿದೆಯೇ? ಆ ಸಮಯದಲ್ಲಿ ಅಶೋಕಣ್ಣ ಕಂದಾಯ ಮಂತ್ರಿಯಾಗಿದ್ದರು. ಆಗ ಅಶೋಕಣ್ಣ ಅವರು ಯಾಕೆ ಧ್ವನಿ ಎತ್ತಲಿಲ್ಲ?” ಎಂದು ಪ್ರಶ್ನಿಸಿದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST