LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಪರಾಷ್ಟ್ರಪತಿ ಧಂಖರ್ ಪದಚ್ಯುತಿಗೆ ಪ್ರತಿಪಕ್ಷಗಳಿಂದ ನೋಟಿಸ್

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಸಂಸತ್ತಿನಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಆದರೆ, ಸದನವನ್ನು ಪಕ್ಷಾತೀತವಾಗಿ ನಡೆಸಿಕೊಂಡು ಹೋಗುತ್ತಿಲ್ಲ. ಆಡಳಿತದ ಪರವಾಗಿ ಕೆಲಸ ಮಾಡುತ್ತಿದ್ದಾರೆಂದು ಉಪರಾಷ್ಟ್ರಪತಿ ಜಗದೀಪ್ ಧಂಖರ್ ವಿರುದ್ಧ ವಿಪಕ್ಷಗಳು ಆರೋಪಿಸಿವೆ. ಈ ಸಂಬಂಧ ಅವರನ್ನು ಪದಚ್ಯುತಿಗೊಳಿಸುವಂತೆ ರಾಜ್ಯಸಭೆ ಪ್ರಧಾನ ಕಾರ್ಯದರ್ಶಿ ಪಿ.ಸಿ ಮೋದಿ ಅವರಿಗೆ ನೋಟಿಸ್ ಸಲ್ಲಿಸಿವೆ. ಧಂಖರ್ ಅವರು ರಾಜ್ಯಸಭೆಯ ಪದನಿಮಿತ್ತ ಸಭಾಧ್ಯಕ್ಷರಾಗಿದ್ದಾರೆ.

ಕಾಂಗ್ರೆಸ್, ಟಿಎಂಸಿ, ಸಿಪಿಐ, ಸಿಪಿಐಎಂ, ಆರ್ ಜೆಡಿ, ಡಿಎಂಕೆ, ಜೆಎಂಎಂ, ಎಎಪಿ ಸೇರಿದಂತೆ ಸುಮಾರು 60 ಪಕ್ಷಗಳ ಸಂಸದರು ಸಹಿ ಹಾಕಿದ್ದಾರೆ. ಕಾಂಗ್ರೆಸ್ಸಿನ ಜೈರಾಮ್ ರಮೇಶ್, ನಾಸೀರ್ ಹುಸೇನ್ ನೋಟಿಸ್ ಸಲ್ಲಿಸಿದ್ದಾರೆ. ಸಾಂವಿಧಾನಕ ಹುದ್ದೆಗಳನ್ನು ಹೊಂದಿರುವ ಕಾಂಗ್ರೆಸ್ ನ ಉನ್ನತ ನಾಯಕರು ನೋಟಿಸ್ ಗೆ ಸಹಿ ಮಾಡಿಲ್ಲವೆಂದು ತಿಳಿದು ಬಂದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST