LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಪರೇಷನ್ ಸಿಂಧೂರ: ಐಪಿಎಲ್ ಫೈನಲ್ ಪಂದ್ಯದಲ್ಲಿ ಸೇನಾ ಗೌರವ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನಲೆಯಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ಸೇನಾ ಗೌರವ ಸಲ್ಲಿಸಲು ಬಿಸಿಸಿಐ ನಿರ್ಧರಿಸಿದೆ. ಹೀಗಾಗಿ ಜೂನ್ 3ರಂದು ಅಹಮದಾಬಾದ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಕ್ಕೆ ಮೂರು ಸೇನಾ ಪಡೆಯ ಮುಖ್ಯಸ್ಥರನ್ನು ಮಂಗಳವಾರ ಬಿಸಿಸಿಐ ಆಹ್ವಾನ ನೀಡಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಈ ಬಗ್ಗೆ ತಿಳಿಸಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಸೈನಿಕರ ಧೈರ್ಯ, ಶೌರ್ಯ, ನಿಸ್ವಾರ್ಥ ಸೇವೆಯನ್ನು ನಾವು ಗೌರವಿಸುತ್ತೇವೆ. ಐಪಿಎಲ್ ಫೈನಲ್ ಪಂದ್ಯದ ಸಮಾರೋಪವನ್ನು ಸೈನಿಕರಿಗೆ ಅರ್ಪಿಸಲು ನಿರ್ಧರಿಸಲಾಗಿದೆ. ಭಾರತೀಯ ಸೇನೆಯ ಮೂರು ಪಡೆಗಳ ಮುಖ್ಯಸ್ಥರು, ಉನ್ನತ ಅಧಿಕಾರಿಗಳು, ಯೋಧರಿಗೆ ಆಹ್ವಾನ ನೀಡಲಾಗಿದೆ ಎಂದು ದೇವಜಿತ್ ಸೈಕಿಯಾ ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST