LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಿಷತ್ ಚುನಾವಣೆ: ಮತ ಚಲಾಯಿಸುತ್ತಿರುವ ನಾಯಕರು

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ವಿಧಾನಸಭೆಯ ಮೇಲ್ಮನೆ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆ ಇದಾಗಿದ್ದು, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ನಮ್ಮ ಶಾಸಕರು ಮತದಾನ ಮಾಡಿದ್ದು, ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ಹಾಕಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕರುಗಳಲ್ಲಿ ಶಿವರಾಂ ಹೆಬ್ಬಾರ್, ಎಸ್.ಟಿ ಸೋಮಶೇಖರ ಅವರು ಯಾರಿಗೆ ಮತ ಹಾಕಿದ್ದಾರೆ ಅನ್ನೋ ಕುತೂಹಲವಿದೆ. ಕಾಂಗ್ರೆಸ್ ನಾಯಕ ಬಸವರಾಜ ರಾಯರೆಡ್ಡಿ ತೆರಳಿ ಮತದಾನ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ನಾವು ಯಾವುದೇ ಪಕ್ಷದೊಂದಿಗೆ ಗುರುತಿಸಿಕೊಂಡಿಲ್ಲ. ಬಿಜೆಪಿ, ಜೆಡಿಎಸ್ ನವರು ನಮಗೆ ಮತ ಹಾಕಿ ಎಂದು ಕೇಳಿಲ್ಲ ಎಂದಿದ್ದಾರೆ. ಇನ್ನು ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಸಹ ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ. ಅವರ ಮತ ಯಾರಿಗೆ ಅನ್ನೋ ಕುತೂಹಲ ಸಹ ಇದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST