ಪ್ರಜಾಸ್ತ್ರ ಸುದ್ದಿ
ಹಾಸನ(Hasana): ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿಕ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ ಸುಮಾರು 8.45ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಭರತ್ ಹೆಸರಿನ ಖಾಸಗಿ ಬಸ್ ಪ್ರಯಾಣ ಬೆಳೆಸಿದೆ. ಹಾಸನದ ಶಾಂತಿಗ್ರಾಮದ ಹತ್ತಿರ ಬರುತ್ತಿದ್ದಂತೆ ಬಸ್ಸಿನ ಟೈರ್ ಸ್ಫೋಟಗೊಂಡಿದೆ. ಆಗ ಬಸ್ ಚಾಲಕ ಗಾಡಿಯನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ. ತಕ್ಷಣ 36 ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗೆ ಇಳಿಸಿದ್ದಾರೆ. ಅಷ್ಟರಲ್ಲಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗ ಹೊತ್ತಿ ಉರಿದಿದೆ. ಅದೃಷ್ಟದಿಂದ ದೊಡ್ಡ ಅನಾಹುತವೊಂದು ತಪ್ಪಿದೆ.



