LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಿಕೋಟಾ: ಪ್ರಾಥಮಿಕ ಶಾಲಾ ಶಿಕ್ಷಕರ ವಿವಿಧ ಬೇಡಿಕೆಗಳ ಮನವಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸುವ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ(Teachers) ಸಂಘದಿಂದ ವಿಜಯಪುರ ಗ್ರಾಮೀಣ ಹಾಗೂ ತಿಕೋಟಾ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. 2017ರವರೆಗೆ ನೇಮಕವಾದ ಶಿಕ್ಷಕರನ್ನು 1ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಬೇಕು. ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು. ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕವಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ ಪದವೀಧರ ಶಿಕ್ಷಕರೆಂದು ಪದನಾಮಿಕರಿಸಬೇಕು.

2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, 1-7/8ಕ್ಕೆ ನೇಮಕ ಹೊಂದಿದವರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1-5ಕ್ಕೆ ಸೀಮಿತಗೊಳಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿದೆ. ಈ ವೇಳೆ ಅರ್ಜುನ ಲಮಾಣಿ, ಹಣಮಂತ ಕೊಣದಿ, ಸಿ.ಟಿ.ಜತ್ತಿ, ಅಶೋಕ ಚನ್ನಬಸಪ್ಪಗೋಳ, ಎಂ.ಎಸ್.ಟಕ್ಕಳಕಿ, ಅಶೋಕ ಬೂದಿಹಾಳ, ಡಿ.ಎಸ್.ಮಠ, ಅಶೋಕ ಧಡಕೆ, ಝಡ್.ಆಯ್.ಇಂಡಿಕರ, ಅಶೋಕ ಭಜಂತ್ರಿ ಸಾಬು ಗಗನಮಲಿ, ವೀರಭದ್ರಪ್ಪ ಬಸು ಬೇನೂರ, ವಿಜಯಕುಮಾರ ದೇಸಾಯಿ, ಪ್ರವೀಣ ಪತ್ತಾರ, ಪ್ರಕಾಶ ಕೂಲಂಗಿ, ಕೊರಬು, ರಾಜು ಉಮರಾಣಿ, ಎಂ.ಎನ್.ನಾಯ್ಕ, ಆರ್.ಎಸ್.ಮಸಳಿ, ಸೋಮನಾಥ ಬಾಗಲಕೋಟ, ಪಪ್ಪು ಗಚ್ಚಿನಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST