ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರ ಸಂಬಂಧ ನಡೆದ ದೇಶವ್ಯಾಪಿ ಹೋರಾಟದ ಪರಿಣಾಮ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಶನಿವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ, ನಮ್ಮ ಹೋರಾಟ ಮುಂದುವರೆಯುತ್ತೆ ಎಂದಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 1 ಕೋಟಿ ರೂಪಾಯಿ, ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.
ಯಾರಿಗೂ ಹೆದರದೆ, ತಲೆ ಬಾಗದೆ ಯಾರ ರಾಜೀನಾಮೆಯನ್ನು ಪಡೆಯಬಹುದು. ದೃಢ ಸಂಕಲ್ಪ ಮಾಡಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಯ ಸಾಧಿಸಬಹುದು. ಇದು ನಮ್ಮ ಹೋರಾಟಕ್ಕೆ ಸಿಕ್ಕ ಗೆಲುವು. ನಮ್ಮ ಇನ್ನು ಎರಡು ಬೇಡಿಕೆಗಳು ಇವೆ ಅಂತಾ ಹೇಳಿದ್ದಾರೆ.



