ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ರೈತರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗೋಲಗೇರಿಯಲ್ಲಿ ಪ್ರತಿಭಟನೆ ಮಾಡುವುದರ ಮೂಲಕ ರೈತರ ಹೋರಾಟಕ್ಕೆ ಬೆಂಬಲ ನೀಡಲಾಯಿತು. ಕೂಡಲೇ ಕೇಂದ್ರ ಸರ್ಕಾರ ಸ್ಪಂದಿಸಿ ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ, ತೊಗರಿ, ಹತ್ತಿಗೂ ಸೂಕ್ತ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಏಳು ದಿನಗಳ ಒಳಗಾಗಿ ಈ ಬೇಡಿಕೆಗಳು ಈಡೇರದಿದ್ದರೆ ಗೋಲಗೇರಿ ಸಂಪೂರ್ಣವಾಗಿ ಬಂದ್ ಮಾಡಿ ರೈತರ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ವಿವಿಧ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿತು. ನಂತರ ತಲಾಟಿ ಮೂಲಕ ಮನವಿ ಸಲ್ಲಿಸಲಾಯಿತು. ಈ ವೇಳೆ ಬಿಡಿಎಸ್ಎಸ್ ಜಿಲ್ಲಾ ಅಧ್ಯಕ್ಷ ಶ್ರೀಶೈಲ ಜಾಲವಾದಿ, ಮುಖಂಡರಾದ ಶಿವು ಹತ್ತಿ, ಬಸವರಾಜ ಹದಗಲ, ದೇವಣ್ಣಗೌಡ ಹದಗಲ, ನೀಲಕಂಠ ಚಲವಾದಿ, ಮಡು ನಾಯ್ಕೋಡಿ, ಬಸವರಾಜ ಮಾರಲಬಾವಿ, ಅಂಬರೀಶ ಮಾರಲಬಾವಿ, ಮುರುಗೇಶ ನಾಯ್ಕೋಡಿ, ಬಾಬು ಜಾಲವಾದಿ, ಶರಣಗೌಡ ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.


