LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಆಗಿ ಸಿದ್ದರಾಮಯ್ಯರನ್ನು ಮುಂದುವರೆಸುವಂತೆ ಪ್ರತಿಭಟನೆ

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಸಿದ್ದರಾಮಯ್ಯರನ್ನು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಸುವಂತೆ ಒತ್ತಾಯಿಸಿ ಅಹಿಂದ ಸಂಘಟನೆಗಳು ಶನಿವಾರ ಪ್ರತಿಭಟನೆ ನಡೆಸಿದವು. ಪೂರ್ಣಾವಧಿಗೆ ಸಿದ್ದರಾಮಯ್ಯರನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದವು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಸಂವಿಧಾನ ರಕ್ಷಣಾ ಸಮಿತಿ, ಅಹಿಂದ ಸಂಘಟನೆಗಳ ಒಕ್ಕೂಟದಲ್ಲಿ ಒತ್ತಾಯಿಸಲಾಯಿತು.

ಈ ವೇಳೆ ಮಾತನಾಡಿದ ಅಹಿಂದ ಮುಖಂಡ ಶಿವರಾಮು, ರಾಜ್ಯದಲ್ಲಿ ಈಗ ಎದ್ದಿರುವ ಗೊಂದಲಗಳಿಗೆ ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲಿ ತೆರೆ ಎಳೆಯಬೇಕು. ಇಲ್ಲದಿದ್ದರೆ ದೆಹಲಿಗೆ ಹೋಗಿ ಎಐಸಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು. ಹಳೆ ಮೈಸೂರು ಭಾಗದ ಮುಖಂಡರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST