LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೋಕಾಕ ನಗರದ ಪೊಲೀಸರ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

ಪ್ರಜಾಸ್ತ್ರ ಸುದ್ದಿ

ಗೋಕಾಕ(Gokaka): ನಗರದಲ್ಲಿ ಪೊಲೀಸರು ಅಮಾಯಕ ಜನರ ಮೇಲೆ ಪದೆಪದೆ ದಬ್ಬಾಳಿಕೆ ಮಾಡುತ್ತಿದ್ದಾರೆ. ರಾಜಕೀಯ ಉದ್ದೇಶದಿಂದ ದಬ್ಬಾಳಿಕೆ ಮಾಡಲಾಗುತ್ತಿದೆ. ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿ ಗುರುವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇತ್ತೀಚೆಗೆ ನಗರದಲ್ಲಿ ಪೊಲೀಸರು ಸಾರ್ವಜನಿಕರ ಮೇಲೆ ದರ್ಪ ತೋರಿಸುತ್ತಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದಾರೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಮೇ 21ರ ಮುಂಜಾನೆ 10 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಬಸವೇಶ್ವರ ವೃತ್ತದ ಮಾರ್ಗದ ಮೂಲಕ ಹಾದು ಡಿವೈಎಸ್ಪಿ ಕಚೇರಿ ತಲುಪಲಾಗುವುದು. ಡಿವೈಎಸ್ಪಿ ಮೂಲಕ ಎಸ್ಪಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಸಾಮಾಜಿಕ ಜಾಲತಾಣಗಳ ಮೂಲಕ ಗೋಕಾಕ ನಗರದ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST