ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಂಬಲ ಸೂಚಿಸಿದ್ದಾರೆ. ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಜೈಲಿಗೆ ಹೋಗಲು ಸಿದ್ಧ ಎಂದು ಹೇಳಿದ್ದಾರೆ. ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ.
ಜಪಾನ್ ಗೆ ಹೋಗಿ ಸ್ಪೀಡ್ ರೈಲಿನಲ್ಲಿ ಕುಳಿತು ಮುಖ್ಯಮಂತ್ರಿಯವರು ಆಶಾ ಕಾರ್ಯಕರ್ತೆಯರನ್ನು ಮನೆಗೆ ಹೋಗಿ ಅಂತಾ ಆದೇಶಿಸಿದ್ದಾರೆ. ಇದು ಸರಿಯಾದ ನಡೆಯಲ್ಲ. ಸಚಿವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇವರೆಲ್ಲ ಯಾವಾಗ ಯಾರ ತಲೆ ಒಡೆಯುತ್ತಾರೆ ಎಂದು ಹೇಳಲಾಗುವುದು. ಕರ್ನಾಟಕ ಬಂದ್ ಗೆ ಕರೆ ಕೊಡಲು ಸಿದ್ಧ ಅಂತಾ ಕಿಡಿ ಕಾರಿದ್ದಾರೆ.

