ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ರಾಜ್ಯಪಾಲರು ಅಂಗೀಕರಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಹೇಳಲಾಗುತ್ತಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಅವರು ರಾಜೀನಾಮೆ ನೀಡಲಿದ್ದಾರೆ. ಆ ಜಾಗಕ್ಕೆ ಯಾರು ಬರುತ್ತಾರೆ ಅನ್ನೋ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ಎಂದು ಹೇಳಲಾಗುತ್ತಿದೆ.
2028ಕ್ಕೆ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿ ಹಾಗೂ ಸ್ಪರ್ಧಿಯಾಗಿರುವ ಸತೀಶ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎನ್ನಲಾಗುತ್ತಿದೆ. ಹೈಕಮಾಂಡ್ ಮುಂದೆ ಇವರು ಆಯ್ಕೆ ಇವರೆಯಂತೆ. ಅಹಿಂದ ನಾಯಕ ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕಳೆಗಿಳಿಸಿದ ಹೈಕಮಾಂಡ್, ಅಹಿಂದ ಮತಗಳು ಬಿಟ್ಟು ಹೋಗದಂತೆ ನೋಡಿಕೊಳ್ಳಲು ಎಸ್ಟಿ ಸಮುದಾಯದ ಸತೀಶ ಜಾರಕಿಹೊಳಿ ಸರಿಯಾದ ಆಯ್ಕೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡುವುದು ಇವರಿಗೆ ಗೊತ್ತಿದೆ. ಪಕ್ಷಕ್ಕೆ ನಿಷ್ಠೆಯಾಗಿದ್ದಾರೆ. ಸಿದ್ದರಾಮಯ್ಯನವರ ರೀತಿಯಲ್ಲಿಯೇ ಸಮಾಜವಾದ, ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಅದರಂತೆ ನಡೆಯುವ ಕೆಲಸ ಮಾಡುತ್ತಿದ್ದು, ಮಾನವ ಬಂಧುತ್ವ ವೇದಿಕೆ ಮೂಲಕ ಸಂಘಟನೆಯ ಕೆಲಸ ಮಾಡುತ್ತಿದ್ದಾರೆ. ಅದರಂತೆ ಪಕ್ಷ ಸಂಘಟನೆಯಲ್ಲಿಯೂ ಇವರು ಚತುರತೆಯಿಂದ ಕೆಲಸ ಮಾಡಲಿದ್ದಾರೆ. ಹೀಗಾಗಿ ಸತೀಶ ಜಾರಕಿಹಳಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಾದಿಗೆ ಸರಿಯಾದ ನಾಯಕ ಎನ್ನಲಾಗುತ್ತಿದ್ದು, ಸರ್ಕಾರ ರಚನೆಯ ಬಳಿಕ ಇದಕ್ಕೆ ಉತ್ತರ ಸಿಗಲಿದೆ.



