ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ರಾಜ್ಯ ವಿಪತ್ತು ನಿರ್ವಹಣೆ ಪಡೆಯ ಸಿಪಿಐ ಶ್ರೀಶೈಲ ಚೌಗಲೆ(37) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚನ್ನಮ್ಮ ನಗರದಲ್ಲಿರುವ ಮನೆಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಚೌಗಲೆ ರೂಮಿನ ಬಾಗಿಲು ಹಾಕಿಕೊಂಡಿದ್ದರು. ಇದರಿಂದ ಅನುಮಾನಗೊಂಡು ಪತ್ನಿ ಎಸ್ ಡಿಆರ್ ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸಿಬ್ಬಂದಿ ರೂಮಿನ ಬಾಗಿಲು ಒಡೆದು ನೋಡಿದಾಗ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಏನು ಕಾರಣ ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.



