LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದ್ವಿತೀಯ ಪಿಯುಸಿ-3ರ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ದ್ವಿತೀಯ ಪಿಯುಸಿ-3ರ ಪರೀಕ್ಷೆಗಳು ಜೂನ್ 9 ರಿಂದ ಜೂನ್ 20ರವರೆಗೆ ಜಿಲ್ಲೆಯ ಒಟ್ಟು 09 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸುವ್ಯವಸ್ಥಿತ ಹಾಗೂ ಪಾರದರ್ಶಕ ಪರೀಕ್ಷೆ ನಡೆಸಲು ಮುಂಜಾಗ್ರತೆಯಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ತರುವುದನ್ನು ಹಾಗೂ ಬಳುಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿ ಪ್ರದೇಶವನ್ನು ಬೆಳಿಗ್ಗೆ 8ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿದೆ. ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಸದರಿ ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ಆದೇಶಿಸಲಾಗಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST