LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖೋಖೋ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಶ್ರೀ ಬಲಭೀಮ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಇಂಡಿ ಹಾಗೂ ಚಡಚಣ ತಾಲೂಕಿನ ಹಲಸಂಗಿಯ ಅರವಿಂದ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ ಖೋಖೋ ಸ್ಪರ್ಧೆಯಲ್ಲಿ ಬಾಲಕಿಯರು ಪಾಲ್ಗೊಂಡು ತಾಲೂಕಾ ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಡಿ.ವೈ.ಸಿಂಗೆ, ಪ್ರಾಚಾರ್ಯರಾದ ಎ.ಎನ್.ದಂದರಗಿ, ಉಪನ್ಯಾಸಕರಾದ ಎಸ್.ಎಸ್.ಬೇಡರ, ಎಸ್.ಎಚ್.ಮುಲ್ಲಾ, ದೈಹಿಕ ಉಪನ್ಯಾಸಕರಾದ ಎಚ್. ಡಬ್ಲು ನಾಯಿಕ, ಪ್ರಶಾಂತ ಬಿರಾದಾರ ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST