LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸ್ಥಾನಕ್ಕೆ ಏಳೆಂಟು ಮಂದಿ ಕಾಯುತ್ತಿದ್ದಾರೆ: ವಿಜಯೇಂದ್ರ

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆ ಎಂದು ನಿತ್ಯ ಹೇಳುವ ಕೆಟ್ಟ ಪರಿಸ್ಥಿತಿ ಸಿದ್ದರಾಮಯ್ಯನವರಿಗೆ ಬಂದಿದೆ. ಆದರೆ, ದಸರಾ ಬಳಿಕ ಅವರು ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ(BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಭಾನುವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಸಂಬಂಧ ದೆಹಲಿಯಲ್ಲಿಯೂ ಚರ್ಚೆ ನಡೆಯುತ್ತಿದೆ. ಸಿಎಂ ಸ್ಥಾನಕ್ಕೆ ಏಳೆಂಟು ಮಂದಿ ಕಾಯುತ್ತಿದ್ದಾರೆ ಎಂದರು.

ಮುಡಾ(Muda Case) ಪ್ರಕರಣ ಬರೀ 14 ನಿವೇಶನಗಳಿಗೆ ಸಂಬಂಧಿಸಿದ್ದಲ್ಲ, ಸಾವಿರಾರು ಕೋಟಿ ರೂಪಾಯಿ ಹಗರಣವಿದು. ಈ ಮೊದಲು ಯಾವುದೇ ಹಗರಣ ನಡೆದಿಲ್ಲ ಎಂದು ಹೇಳಿದವರ ಸ್ಥಿತಿ ಎಲ್ಲಿಗೆ ಬಂದಿದೆ ನೋಡಿ. ಅವರ ತಪ್ಪಿನ ಅರಿವಾಗಿದ್ದಕ್ಕೆ 14 ನಿವೇಶನಗಳನ್ನು ವಾಪಸ್ ಮಾಡಿದ್ದಾರೆ. ಸಿದ್ದರಾಮಯ್ಯನವರೆ ಸಚಿವ ಸತೀಶ್ ಜಾರಕಿಹೊಳಿಯನ್ನು ದೆಹಲಿಗೆ ಕಳಿಸಿದ್ದಾರೆ. ಯಾವ ಸಮಯದಲ್ಲಾದರೂ ಅವರು ರಾಜೀನಾಮೆ ನೀಡಬಹುದು ಅಂತಾ ಹೇಳಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST