ಪ್ರಜಾಸ್ತ್ರ ಸುದ್ದಿ
ಹೈದರಾಬಾದ್(Hydrebada): ಇಲ್ಲಿನ ಸರ್ದಾರ್ ವಲ್ಲಾಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಇಲ್ಲಿಯೇ ತರಬೇತಿ ಪಡೆಯುತ್ತಿರುವ ಮತ್ತೊಬ್ಬ ಪ್ರೊಬೆಷನರಿ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯು ಸ್ನೇಹಿತನ ಅಪಾರ್ಟ್ ಮೆಂಟ್ ಗೆ ಹೋಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 30 ವರ್ಷದ ಪ್ರೊಬೆಷನರಿ ಅಧಿಕಾರಿ ದೂರು ನೀಡಿದ್ದು ಅತ್ತಾಪುರ ಪೊಲೀಸ್ ಠಾಣೆಯಲ್ಲಿ ಜುಲೈ 18ರಂದು ಪ್ರಕರಣ ದಾಖಲಾಗಿದೆ. ಇದೀಗ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಜುಲೈ 9ರಂದು ಬಲವಂತವಾಗಿ ಎಳೆದೊಯ್ದು ಕೂದಲು ಹಿಡಿದು ಕುತ್ತಿಗೆ ಚಾಕು ಇಟ್ಟು ಬೆದರಿಕೆ ಹಾಕಿದ. ಜುಲೈ 10ರಂದು ದೈಹಿಕ ಹಲ್ಲೆ ನಡೆಸಿದ. ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್ ಮಾಡುವ ಉದ್ದೇಶದಿಂದ ತನ್ನ ಪತಿಗೆ ಕಳಿಸಿದ್ದಾನೆ ಅನ್ನೋ ಗಂಭೀರ ಆರೋಪಗಳನ್ನು ಮಾಡಿದ್ದು, ಬಿಎನ್ ಎಸ್ ಕಾಯ್ದೆಯ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ತರಬೇತಿ ಕೇಂದ್ರಿಂದ ಹೊರ ಹಾಗಿದ್ದಾನೆ. ಆತನಿಗೆ ನೋಟಿಸ್ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.



