ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಿಂದಲೇ ದೂರ ಉಳಿಯುತ್ತಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಸ್ವತಃ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಕುರಿತು ಸಚಿವ ಹಾಗೂ ಸಿದ್ದರಾಮಯ್ಯ ಪುತ್ರ ಯತೀಂದ್ರ ಪ್ರತಿಕ್ರಿಯೆ ನೀಡಿದ್ದು, 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದಾರೆ. ಸಕ್ರಿಯ ರಾಜಕಾರಣದಿಂದ ದೂರ ಸರಿಯುವುದಾಗಿ ಹೇಳಿಲ್ಲ ಎಂದಿದ್ದಾರೆ.
ಈ ಹಿಂದೆಯೂ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿಕೊಂಡು ಬಂದಿದ್ದಾರೆ. ಈಗ ಹೇಳಿರುವುದು ಹೊಸದೇನು ಅಲ್ಲ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದರ್ಥವಲ್ಲ ಅಂತಾ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಕರೆದಿದ್ದು, ವರಿಷ್ಠರು ಈ ಬಗ್ಗೆ ನಿರ್ಧರಿಸುತ್ತಾರೆ ಅಂತಾ ಹೇಳಿದರು.



