ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿದ್ದರಾಮಯ್ಯನವರು ಸಾರ್ವಜನಿಕ ಜೀವನದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಬದ್ಧತೆ ಹಾಗೂ ಸಾಂವಿಧಾನಿಕ ಮೌಲ್ಯಗಳ ಮೇಲೆ ನಂಬಿಕೆ ಹೊಂದಿದ್ದಾರೆ. 8 ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅನುಭವ ದೇಶದಲ್ಲಿ ಕಾಂಗ್ರೆಸ್ ವಿಸ್ತರಿಸಲು ನೆರವಾಗಲಿದೆ. ಕಾಂಗ್ರೆಸ್ಸಿಗೆ ಅವರೊಂದು ಶಕ್ತಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ಆಯ್ಕೆ ಆಗಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ಎಲ್ಲರೂ ಸಾಮಾಜಿಕ ನ್ಯಾಯದ ವಿಸ್ತರಣೆ, ಸಂವಿಧಾನ ರಕ್ಷಣೆಗೆ ಹಾಗೂ ಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧದ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಅಂತಾ ಹೇಳಿದ್ದಾರೆ.



