ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ಗುರುವಾರ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಗಳವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆಗೆ ಇದರ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿದೆ ಅಂತಾನೂ ಹೇಳಲಾಗುತ್ತಿದೆ. ಆದರೆ, ಇದೆಲ್ಲ ಊಹಾಪೋಹ ಎಂದು ಸಚಿವ ಎಂ.ಬಿ ಪಾಟೀಲ ಹೇಳಿದ್ದಾರೆ. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ. ಬ್ರೇಕ್ ಫಾಸ್ಟ್ ಬಳಿಕ ರಾಜೀನಾಮೆ ಕೊಡುತ್ತಾರೆ ಅನ್ನೋದು ಊಹಾಪೋಹ ಎಂದರು.
ರಾಜಸಭ್ಯ ಹಾಗೂ ಎಂಎಲ್ಸಿ ಚುನಾವಣೆ ಬಗ್ಗೆ ಚರ್ಚಿಸಲು ಹೋಗಿದ್ದೇವು. ಸಿಎಂ, ಡಿಸಿಎಂ, ಕೆ.ಸಿ ವೇಣುಗೋಪಾಲ ಮಾಧ್ಯಮಗಳಲ್ಲಿ ಮಾತನಾಡಿದ್ದಾರೆ. ರಾಜ್ಯಸಭೆ ಚುನಾವಣೆ ಬಗ್ಗೆ ನಮ್ಮನ್ನು ಕರೆಸಿದ್ದಾರೆ ಎಂದಿದ್ದಾರೆ. ಬೇರೆ ಯಾವುದೇ ಚರ್ಚೆ ಆಗಿಲ್ಲ. ನಾವೆಲ್ಲ ಸಿದ್ದರಾಮಯ್ಯ ಜೊತೆಗೆ ಇದ್ದೇವು. ಒಟ್ಟಿಗೆ ದೆಹಲಿಗೆ ಹೋಗಿ ಬಂದಿದ್ದೇವೆ ಅಂತಾ ಹೇಳಿದರು.



