ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ತಾಲೂಕಿನ ಸಿದ್ದು ಮಾಗಣಗೇರಿ ಅವರನ್ನು ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳದ ನೂತನ ತಾಲೂಕಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಾಗಲಕೋಟೆ ತಾಲೂಕಿನ ರಾಂಪೂರ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಗುರು ಪ್ರಸಾದ್ ಅವರು ಆದೇಶಪತ್ರ ನೀಡಿ ಗೌರವಿಸಿದರು.
ಈ ವೇಳೆ ಮಾತನಾಡಿದ ಸಿದ್ದು ಮಾಗಣಗೇರಿ, ಕನ್ನಡ ನಾಡು, ನುಡಿ, ನೆಲ, ಜಲಕ್ಕಾಗಿ ಅನೇಕ ಮಹನೀಯರು ಹೋರಾಡಿದ್ದಾರೆ. ಸಾಹಿತಿಗಳು, ಕನ್ನಡಪರ ಸಂಘಟನೆಗಳ ಹೋರಾಟಗಾರರು ಕನ್ನಡಕ್ಕಾಗಿ ಸದಾ ಧ್ವನಿ ಎತ್ತಿದ್ದಾರೆ ಎಂದರು. ವೇದಿಕೆ ಮೇಲೆ ಬಾಗಲಕೋಟೆ ಜಿಲ್ಲಾಧ್ಯಕ್ಷ ಹಣಮಂತ ಹಟ್ಟಿ, ವಿಜಯಪುರ ಜಿಲ್ಲಾಧ್ಯಕ್ಷ ಪುಂಡಲೀಕ ಬಿರಾದಾರ, ಆಲಮೇಲ ತಾಲೂಕಾಧ್ಯಕ್ಷ ಬಸವರಾಜ ಕೋಟಾರಗಸ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


