ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಅಪರಿಚಿತ ವಾಹನವೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ವಿಜಯಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿ ಹತ್ತಿರದ ಬಮ್ಮನಜೋಗಿ ಕ್ರಾಸ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. 21 ವರ್ಷದ ಖಂಡೆರಾಯ್ ಮೃತ ಯುವಕ ಎಂದು ಹೇಳಲಾಗುತ್ತಿದೆ.
ಮೃತದೇಹವನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಕಲಬುರಗಿ ಜಿಲ್ಲೆಯ ಬೆಳಮಗಿ ಗ್ರಾಮದ ಯುವಕ ಮೃತಪಟ್ಟಿದ್ದಾನೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ತನಿಖೆ ನಡೆಯುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.


