ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಅಖಂಡ ಸಿಂದಗಿ ತಾಲೂಕಿನ ಲಿಂಗಾಯತ ಪಂಚಮಸಾಲಿ ಸಮಾಜದ ಎಸ್ಎಸ್ಎಲ್ ಸಿ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 2025-2026ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೇ 30 ರಂದು ಹಮ್ಮಿಕೊಳ್ಳಲಾಗಿದೆ. ಅಖಂಡ ಸಿಂದಗಿ ತಾಲೂಕಿನ ಪಂಚಮಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಹಾಗೂ ಸಿಬಿಎಸ್ಇ ಪಠ್ಯಕ್ರಮದ ಪರೀಕ್ಷೆಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಮೇ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬಯಸುವ ಸಿಂದಗಿ ತಾಲೂಕಿನವರು ರಮೇಶ ಬಿರಾದಾರ(8105849347), ಸತೀಶ ಬಸರಕೋಡ(9972564890), ಪ್ರವೀಣ ಬಿರಾದಾರ(9902656755), ಸಿದ್ಧಾರಾಮ ಕೂಡಗಿ(9535398921), ಎಸ್.ಬಿ ಪಾಟೀಲ(9342811006) ಮತ್ತು ಆಲಮೇಲ ತಾಲೂಕಿನವರು ಸಂತೋಷ ಅಮರಗೊಂಡ(9980883858), ಶ್ರೀಶೈಲ ಪಾಟೀಲ(9900412732), ದೇವರ ಹಿಪ್ಪರಗಿ ತಾಲೂಕಿನವರು ಜಿ.ಪಿ.ಬಿರಾದಾರ(9945198229), ನಾಗೇಶ ನಾಗೂರ(9880851143) ಇವರನ್ನು ಸಂಪರ್ಕಿಸಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಹಂಗರಗಿ ಹಾಗೂ ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ ಜಂಟಿ ತಿಳಿಸಿದ್ದಾರೆ.



