LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂದಗಿ: ಆಗಸ್ಟ್ 23ರಂದು ಗಾಣಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಸಿಂದಗಿ ತಾಲೂಕು ಗಾಣಿಗ ಸಮಾಜದ ವತಿಯಿಂದ ಆಗಸ್ಟ್ 23 ಭಾನುವಾರ ನಗರದ ಮಾಂಗಲ್ಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ. ಎಸ್ಎಸ್ಎಲ್ ಸಿ ಹಾಗೂ ಪಿಯುಸಿಯಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ರೂಪಾಯಿ ನಗದು ಬಹುಮಾನ, ಪ್ರಮಾಣ ಪತ್ರ ಹಾಗೂ ಎಂಬಿಬಿಎಸ್ ಪದವಿ ಪಡೆದವರಿಗೆ ಸನ್ಮಾನ ನಡೆಸಲಾಗುವುದು ಎಂದು ಸಮಾಜದ ತಾಲೂಕಾಧ್ಯಕ್ಷ ವೀರುಪಾಕ್ಷ ಗಂಗನಳ್ಳಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಮಾಜಿ ತಾಲೂಕಾಧ್ಯಕ್ಷ ಬಿ.ಎಚ್.ಬಿರಾದಾರ ಮಾತನಾಡಿ, ಪ್ರತಿಭಾ ಪುರಸ್ಕಾರದ ಮೂಲಕ ಸಮಾಜದ ವಿದ್ಯಾರ್ಥಿಗಳನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ. ಇದೆ ವೇಳೆ ಸಮಾಜಕ್ಕೆ ಸಿಗಬೇಕಾದ ಮೀಸಲಾತಿ ವಿಚಾರದ ಕುರಿತು ಜಾಗೃತಿ ಮೂಡಿಸಬೇಕಾಗಿದೆ ಎಂದರು. ಸಮಾಜದ ತಾಲೂಕು ಉಪಾಧ್ಯಕ್ಷ ಬಸವರಾಜ ಸಜ್ಜನ ಮಾತನಾಡಿ, ಅಂಬೇಡ್ಕರ್ ವೃತ್ತದಿಂದ ಮಾಂಗಲ್ಯ ಭವನದ ತನಕ ಮೆರವಣಿಗೆ ನಡೆಸಲಾಗುವುದು. ಈ ವೇಳೆ ವಿವಿಧ ಕಲಾ ತಂಡಗಳು, ಬೈಕ್ ರ್ಯಾಲಿ, ಡಿಜೆ ವ್ಯವಸ್ಥೆ ಮಾಡಲಾಗಿದೆ. ಸುಮಾರು 10 ಸಾವಿರ ಸಮಾಜದ ಜನರು ಸೇರುವ ನಿರೀಕ್ಷೆಯಿದೆ ಎಂದರು.

ಈ ವೇಳೆ ಆಲಮೇಲ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಶೀಲವಂತ, ಸಿಂದಗಿ ತಾಲೂಕು ಉಪಾಧ್ಯಕ್ಷರಾದ ನಾನಾಗೌಡ ಪಾಟೀಲ, ಸಿದ್ದನಗೌಡ ಪಾಟೀಲ, ಚಂದ್ರಕಾಂತ ಮಲಘಾಣ, ಪ್ರವೀಣ ಕಂಠಿಗೊಂಡ, ನಿಂಗಣ್ಣ ಮರಡಿ, ಧರೆಪ್ಪ ಕಂಠಿಗೊಂಡ, ಸಂಗಣ್ಣ ಹಿಪ್ಪರಗಿ, ಸಿದ್ಧಲಿಂಗ ಚೌಧರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

news_1787392632_0_647.webp

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST