ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಕಲಕೇರಿಯಿಂದ ಗುಬ್ಬೇವಾಡಕ್ಕೆ ಹೋಗುವಾಗ ಹಡಗಿನಹಾಳ ಕ್ರಾಸ್ ಹತ್ತಿರ ನಿಂತಿದ್ದ ಟ್ರ್ಯಾಕ್ಟರ್ ಗೆ ಟಂಟಂ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಸಿಂದಗಿ ತಾಲೂಕಿನ ಹಾಗೂ ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಹಡಗಿನಹಾಳ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಕಲಕೇರಿ ತಾಂಡಾದ ಸುಮಾರು 55 ವರ್ಷದ ಥಾವರುದೀಪು ಚವ್ಹಾಣ ಅನ್ನೋ ವ್ಯಕ್ತಿ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ನಂಬರ್ ಸಹ ಇಲ್ಲದ ಹೊಸ ಟಂಟಂ ವಾಹನ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಈ ದುರಂತ ಸಂಭವಿಸಿದೆ. ಟಂಟಂ ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಕಲಕೇರಿ ಪೊಲೀಸ್ ಠಾಣೆ ಪಿಎಸ್ಐ ರಮೇಶ ಮಂಟೂರು ಅವರು ಸಿಂದಗಿಗೆ ಬಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.



