ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಶುಭ ಕೋರಿದರು. ಈ ವೇಳೆ ನಿರ್ಗಮಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವೇದಿಕೆ ಮೇಲಿದ್ದರು.


