ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿದ್ದಾರೆ. ದೇವಸ್ಥಾನದ ಆಡಳಿತ ಮಂಡಿಳಿಯವರು, ಅಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಮಧ್ಯಾಹ್ನ 3.35ರ ಸುಮಾರಿಗೆ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ವಿಜಯ್ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಿರುವುದರಿಂದ ಸಾಕಷ್ಟು ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಆದರೂ ಗುಡಿಯ ಮುಂದೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ನಿಯಂತ್ರಿಸಲು ಪೊಲೀಸರು ಸಾಕಷ್ಟು ಹರಸಾಹಸ ಪಡಬೇಕಾಯಿತು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು, ಅಲ್ಲಿಂದ ರಸ್ತೆ ಮಾರ್ಗದ ಮೂಲಕ ದೇವಸ್ಥಾನಕ್ಕೆ ಭೇಟಿ ಕೊಟ್ಟರು.



