ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ(Chamarajanagara): ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ಸಿದ್ಧಪಡಿಸಲಾಗಿದೆ. ಶೀಘ್ರದಲ್ಲಿ ಕೇಂದ್ರಕ್ಕೆ ಕಳಿಸುತ್ತೇವೆ. ಮೇಕೆದಾಟು ಯೋಜನೆ ಆಕ್ಷೇಪಿಸಲು ತಮಿಳಿನಾಡಿಗೆ ಹಕ್ಕಿಲ್ಲ. ಕೇಂದ್ರ ಜಲ ಆಯೋಗ ತೀರ್ಮಾನಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕೊಳ್ಳೇಗಾಲದಲ್ಲಿ ಜೀರ್ಣೋದ್ಧಾರಗೊಂಡಿರುವ ಮಧ್ಯರಂಗನಾಥಸ್ವಾಮಿ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿದ್ದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ತಮಿಳುನಾಡಿಗೆ 177 ಟಿಎಂಸಿ ನೀರು ಬಿಡಬೇಕು ಅನ್ನೋ ಸ್ಪಷ್ಟ ಆದೇಶವಿದೆ. ಈ ಬಗ್ಗೆ ಚರ್ಚಿಸುತ್ತೇವೆ. ಕೇಂದ್ರದಿಂದ ಅನುಮತಿ ಸಿಕ್ಕ ಬಳಿಕ ಭೂಮಿ ಪೂಜೆ ಮಾಡಲಾಗವುದು. ಮುಳುಗಡೆಯಾಗಿರುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲಾಗುವುದು ಅಂತಾ ಹೇಳಿದರು.



