ಪ್ರಜಾಸ್ತ್ರ ಸುದ್ದಿ
ಯಲ್ಲಾಪುರ(Yallapura): ತಾಲೂಕಿನ ಆರತಿಬೈಲ್ ಸಮೀಪದ ಬಳಗಾರ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ. ಧಾರವಾಡದಿಂದ ಧರ್ಮಸ್ಥಳ ಹಾಗೂ ಗೋಕರ್ಣ ಪ್ರವಾಸಕ್ಕೆ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದವರು ಮೃತಪಟ್ಟಿದ್ದಾರೆ. ಲಾರಿ ಹಾಗೂ ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರಂತ ಸಂಭವಿಸಿದೆ.
ಅಂಕೋಲಾದಿಂದ ಯಲ್ಲಾಪುರದತ್ತ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ಸಂಪೂರ್ಣ ನುಜ್ಜುಗುಜ್ಜಾಗಿ, ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು. ಈ ಬಗ್ಗೆ ಶಾಸಕ ಆರ್.ವಿ ದೇಶಪಾಂಡೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಭಗವಂತನು ಮೃತರ ಆತ್ಮಗಳಿಗೆ ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಧೈರ್ಯ ಮತ್ತು ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.



