LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾರರ ಪರಿಷ್ಕರಣೆ ಪಟ್ಟಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ, ಹೆಸರು ತೆಗೆದು ಹಾಕುವ ಕುರಿತು ನವೆಂಬರ್ 9, 10, 23 ಹಾಗೂ 24ರಂದು ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ವಿಶೇಷ ಅಭಿಯಾನ ಪ್ರಕ್ರಿಯೆ ನಡೆದಿದೆ. ಈ ವಿಶೇಷ ಅಭಿಯಾನ ದಿನಗಳಂದು ಎಲ್ಲ ಬಿಎಲ್ ಒಗಳು ತಮ್ಮ ಮತಗಟ್ಟೆಗಳಲ್ಲಿ ಉಪಸ್ಥಿತರಿರುವರು. ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯೂ ಸೇರಿದಂತೆ ಅಗತ್ಯ ಮಾಹಿತಿ ಅವಲೋಕಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ನಿಮಿತ್ಯ ನಗರದ ಟ್ರೇಜರಿ ಕಾಲೋನಿಯ ಮತಗಟ್ಟೆ ಸಂಖ್ಯೆ 40 ರಿಂದ 42ಕ್ಕೆ, ತಿಕೋಟ ತಾಲೂಕಿನ ತೊರವಿಯ ಮತಗಟ್ಟೆ ಸಂಖ್ಯೆ 92 ರಿಂದ 97 ಹಾಗೂ ತಾಜಪೂರ ಗ್ರಾಮದಲ್ಲಿ ಬರುವ ಮತಗಟ್ಟೆ ಸಂಖ್ಯೆ 109 ರಿಂದ 112ಕ್ಕೆ ಅನಿರೀಕ್ಷಿತ ಭೇಟಿ ನೀಡಿ, ಪ್ರಗತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಜಯಪುರದ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ತಹಶೀಲ್ದಾರರು, ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST