LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನನ್ನ ವಿರುದ್ಧದ ದೂರು ದ್ವೇಷಪೂರಿತ: ಹೆಚ್ಡಿಕೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಸುರೇಶ್ ಬಾಬು ಎಂಬುವರ ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಎಫ್ಐಆರ್ ದಾಖಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಹೆಚ್ಡಿಕೆ, ನನ್ನ ವಿರುದ್ಧದ ದೂರು ದ್ವೇಷಪೂರತವಾದದ್ದು. ರಾಜ್ಯ ಕಾಂಗ್ರೆಸ್ ಸರ್ಕಾರದ ದ್ವೇಷದ ಸಾಧನೆಗೆ ಕೋರ್ಟ್ ಮೂಲಕವೇ ಉತ್ತರ ನೀಡುತ್ತೇನೆ ಎಂದಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಪ್ರಚಾರದಲ್ಲಿರುವ ಹೆಚ್ಡಿಕೆ, ಅಕ್ಕೂರು ಹೊಸಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಎಫ್ಐಆರ್ ಪ್ರತಿ ಓದಿದ ಮೇಲೆ ಅದು ದ್ವೇಷಪೂರಿತ ಎಂದು ತಿಳಿಯಿತು. ನಾನು ಸುದ್ದಿಗೋಷ್ಠಿ ಮಾಡಿದೆ ಎಂದು, ನಿಖಿಲ್ ಅದಕ್ಕೆ ಪೂರಕ ಹೇಳಿಕೆ ನೀಡದ ಅಂತ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ ಬಾಬು ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಕ್ಕಾಗಿ ಎಫ್ಐಆರ್ ಮಾಡಿಸಿದ್ದಾರೆ. ಚನ್ನಪಟ್ಟಣದಲ್ಲಿ ಇವರ ಷಡ್ಯಂತ್ರ ನಡೆಯಲ್ಲೆಂದು ತಿಳಿದು ಕುತಂತ್ರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST