LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಸಂಗಮೇಶ್ವರ ಮಹಾರಾಜರು’ ಸಿನಿಮಾ ಮೊದಲ ಹಾಡು ಬಿಡುಗಡೆ

ಪ್ರಜಾಸ್ತ್ರ ಸುದ್ದಿ

ಜಮಖಂಡಿ(Jamakandi): ‘ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು’ ಸಿನಿಮಾದ ಮೊದಲ ಲಿರಿಕಲ್‌ ವಿಡಿಯೋ ಹಾಡು ನವೆಂಬರ್ 21ರಂದು ಬಿಡುಗಡೆಯಾಗಿದೆ. ಶ್ರೀ ಸದ್ಗುರು ಸಂಗಮೇಶ್ವರ ಮಹಾರಾಜರ 93ನೇ ಪುಣ್ಯಸ್ಮರಣೆಯಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಹಿಪ್ಪರಗಿಯಲ್ಲಿ ಶ್ರೀ ಸದ್ಗುರು ಪ್ರಭುಜಿ ಮಹಾರಾಜರಿಂದ "ಸ್ವರೂಪ ಸಂದರ್ಶನ" ಯೂಟ್ಯೂಬ್ ಮೂಲಕ ಹಾಡು ಬಿಡುಗಡೆಯಾಗಿದೆ.

ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಾಧವಾನಂದ ಯೋ ಶೇಗುಣಸಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು ನಿರ್ದೇಶಕ ರಾಜರವಿಶಂಕರ್(ವಿ.ರವಿ) ಹಾಡು ಬರೆದಿದ್ದು, ಗಾಯಕ ರವೀಂದ್ರ ಸೊರಗಾವಿ ಹಾಡಿದ್ದಾರೆ. ಎ.ಟಿ ರವೀಶ್ ಸಂಗೀತ ನೀಡಿದ್ದಾರೆ. ಕಾರ್ಯಕ್ರಮದಲ್ಲಿ
ಸುದರ್ಶನ ಮಹಾರಾಜ ಕಡಕಿ, ಆನಂದಸಿದ್ದ ಮಹಾರಾಜ ಅಸುರ್ಲೆ, ಮಹಾದೇವ ಮಹಾರಾಜ ನಂದಗಾಂವ, ಸಿದ್ದಾರೂಢ ಶರಣರು ಹಿಪ್ಪರಗಿ, ಸಿದ್ದಲಿಂಗ ಮಹಾರಾಜರು ಹಿಪ್ಪರಗಿ, ಶಾಸಕ ಸಿದ್ದು ಸವದಿ, ಸಿದ್ದು ಕೊಣ್ಣೂರ, ಗಿರೀಶ್ ಜಿಡ್ಡಿಮನಿ, ಭಾವುರಾಜ ಜಿಡ್ಡಿಮನಿ, ನಟ ವಿಶ್ವಪ್ರಕಾಶ್ ಟಿ ಮಲಗೊಂಡ ಸೇರಿದಂತೆ ಸಾಧು ಸತ್ಪುರುಷರು ಗಣ್ಯರು ಉಪಸ್ಥಿತರಿದ್ದರು.

ವಿಶೇಷವಾಗಿ ಸಂಗಮೇಶ್ವರರ ಅಭಿನಯ ಮಾಡುತ್ತಿರುವ ರವಿನಾರಾಯಣ್ ಅವರು ಲಕ್ಷಾಂತರ ಜನರ ಸಮ್ಮುಖದಲ್ಲಿ ಸಂಗಮೇಶ್ವರ ಮಹಾರಾಜರ ವೇಷದಲ್ಲಿ ಈ ಆಡಿಯೋ ಬಿಡುಗಡೆಯ ಸಂದರ್ಭದಲ್ಲಿ ವೇದಿಕೆಯ ಮೇಲೆ ಬಂದಿದ್ದು ವಿಶೇಷವಾಗಿತ್ತು. ‘ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ’ ಭಕ್ತಿ ಪ್ರಧಾನ ಹಾಡಿನ್ನು ಎಲ್ಲರೂ ಪ್ರಶಂಸಿಸಿದರು. ಹಿರಿಯ ನಟರಾದ ರಾಮಕೃಷ್ಣ, ವಿಜಯಕಾಶಿ, ನಟಿ ವಿನಯಪ್ರಸಾದ್, ಸಂದೀಪ್ ಮಲಾನಿ, ನಾರಾಯಣ ಸ್ವಾಮಿ, ವಿಶ್ವಪ್ರಕಾಶ್ ಟಿ ಮಲಗೊಂಡ, ಭವ್ಯಶ್ರೀ ರೈ ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ರಾಜಾ ರವಿಶಂಕರ್ (ವಿ.ರವಿ) ನಿರ್ದೇಶನ, ಸಿ.ನಾರಾಯಣ್ ಛಾಯಾಗ್ರಹಣ, ಎ.ಟಿ.ರವೀಶ್ ಸಂಗೀತ, ಡಿ.ರವಿ ಸಂಕಲನ, ಕುಮಾರ್ ನೊಣವಿನಕೆರೆ ಪ್ರಸಾದನ ಈ ಚಿತ್ರಕ್ಕಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST